
ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧಕ್ಕೆ ಸುಪ್ರೀಂಕೋರ್ಟ್ ನಕಾರ
ನವದೆಹಲಿ, ಆಗಸ್ಟ್ 8: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿಕರ ವರದಿಗಳನ್ನು ನಿರ್ಬಂಧಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್, ಮಾಧ್ಯಮಗಳ ಮೇಲೆ ಯಾವುದೇ ನಿರ್ಬಂಧ ಹೇರಲು ನಿರಾಕರಿಸಿದೆ. ಇದರಿಂದ ತಡೆಯಾಜ್ಞೆ ಕೋರಿ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದ ಧರ್ಮಸ್ಥಳ ದೇವಸ್ಥಾನದ ಸಂಸ್ಥೆಗಳ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ. ಅವರಿಗೆ ಭಾರೀ ಹಿನ್ನಡೆಯಾಗಿದೆ. ‘ಹರ್ಷೇಂದ್ರ ಕುಮಾರ್ ಡಿ ವರ್ಸಸ್ ಕುಡ್ಲ ರ್‍ಯಾಂಪೇಜ್ ಮತ್ತು ಇತರರು’ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ…